Home ಟಾಪ್ ಸುದ್ದಿಗಳು ರಾಜ್ಯದಲ್ಲಿ NEP ರದ್ದು; ರಾಜ್ಯ ಶಿಕ್ಷಣ ನೀತಿ ಜಾರಿ ಮಾಡುತ್ತೇವೆ: ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ NEP ರದ್ದು; ರಾಜ್ಯ ಶಿಕ್ಷಣ ನೀತಿ ಜಾರಿ ಮಾಡುತ್ತೇವೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಎನ್ ಇಪಿ ರದ್ದು ಮಾಡುತ್ತಿದ್ದೇವೆ. ರಾಜ್ಯ ಶಿಕ್ಷಣ ನೀತಿ ಜಾರಿ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.


ಎನ್ ಇಪಿ ರದ್ದು ಕುರಿತ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇವತ್ತು ಶಿಕ್ಷಣ ಇಲಾಖೆ ಸಮಸ್ಯೆ ಬಗ್ಗೆ ಚರ್ಚೆ ಆಗಿದೆ. ಎನ್ ಇಪಿ ಸಾಧಕ-ಬಾಧಕದ ಬಗ್ಗೆ ಚರ್ಚೆ ಆಗಿದೆ. ನಮ್ಮ ಶಿಕ್ಷಣ ರಾಷ್ಟ್ರದಲ್ಲಿ ಉತ್ತಮವಾಗಿದೆ. ಅನೇಕ ಸಮಸ್ಯೆಗಳನ್ನ ಕುಲಪತಿಗಳು ಹೇಳಿದ್ದಾರೆ.


ಕೇಂದ್ರದಿಂದ ಶಿಕ್ಷಣ ಇಲಾಖೆಗೆ ನಮಗೆ ಕಡಿಮೆ ಹಣ ಬರುತ್ತಿದೆ ಎಂದು ತಿಳಿಸಿದರು.ನಮ್ಮ ಶಿಕ್ಷಣ ಗುಣಮಟ್ಟ ಹೆಚ್ಚಳಕ್ಕೆ ಸರ್ಕಾರ ಬದ್ಧವಾಗಿದೆ. ಎನ್ಇಪಿಯನ್ನ ತರಾತುರಿಯಲ್ಲಿ ಕರ್ನಾಟಕದಲ್ಲಿ ಜಾರಿ ಮಾಡಲಾಯ್ತು. ಯುಪಿ, ಮಹಾರಾಷ್ಟ್ರ, ಮಧ್ಯಪ್ರದೇಶ ಸೇರಿದಂತೆ ಬಜೆಪಿ ಆಡಳಿತ ರಾಜ್ಯದಲ್ಲಿ ಎನ್ಇಪಿ ಇಲ್ಲ. ಪ್ರಾಥಮಿಕ ಶಿಕ್ಷಣದಿಂದ ಪ್ರಾರಂಭ ಮಾಡಬೇಕಿತ್ತು. ಆದರೆ ಆತುರವಾಗಿ ಜಾರಿ ಮಾಡಿದ್ದಾರೆ. ಹಿಂದೆ ಸಿದ್ದರಾಮಯ್ಯ ಅವರು ಕಾಲದಲ್ಲಿ ಇದ್ದ ಎಜುಕೇಷನ್ ಪಾಲಿಸಿ ಒಂದು ಇದೆ. ತಜ್ಞರ ಒಳಗೊಂಡು ಮಾಡಿದ ಒಂದು ರಿಪೋರ್ಟ್ ಇದೆ. ಎನ್ಇಪಿಯಲ್ಲಿ ನಮಗೆ ಅನೇಕ ವಿಚಾರದಲ್ಲಿ ಒಪ್ಪಿಗೆ ಇಲ್ಲ. ತಂತ್ರಜ್ಞಾನಕ್ಕೆ ತಕ್ಕಂತೆ ಎಜುಕೇಷನ್ ಇರಬೇಕು. ಇದಕ್ಕೆ ತಕ್ಕಂತೆ ಪಾಲಿಸಿ ರೂಪಿಸುತ್ತೇವೆ ಎಂದರು.

Join Whatsapp
Exit mobile version