ಬೆಂಗಳೂರು: ಗೋಬಿ, ಕಬಾಬ್ ಮತ್ತು ಪಾನಿಪುರಿಗೆ ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ (FSSAI) ತಿಳಿಸಿತ್ತು.
ಇದೀಗ, ಕೇಕ್ಗೆ ಬಳಸುವ ಪದಾರ್ಥಗಳಲ್ಲೂ ಕ್ಯಾನ್ಸರ್ಕಾರಕ ಅಂಶ ಪತ್ತೆಯಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ತಿಳಿಸಿದೆ.
ಕೇಕ್ಗೆ ಬಳಸುವ ಪದಾರ್ಥಗಳು ಕಲಬರಿಕೆಯಿಂದ ಕೂಡಿವೆ ಎಂಬ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಕೇಕ್ ಮಾದರಿಗಳನ್ನು ಸಂಗ್ರಹಿಸಿದರು. ಪರಿಶೀಲನೆಗೆ ಒಳಪಡಿಸಿದಾಗ 12 ಮಾದರಿ ಕೇಕ್ಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ.
ವಿಶೇಷವಾಗಿ ರೆಡ್ ವೆಲ್ವೆಟ್ ಹಾಗೂ ಬ್ಲಾಕ್ ಫಾರೆಸ್ಟ್ ಕೇಕ್ನಲ್ಲಿ ಹೆಚ್ಚು ಬಣ್ಣ ಬಳಕೆ ಮಾಡುವುದರಿಂದ, ಇದು ಮನುಷ್ಯನ ಆರೋಗ್ಯಕ್ಕೆ ಹಾನಿ ಉಂಟು ಮಾಡುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ.