ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಬಹಿರಂಗಪಡಿಸಬೇಕು ಎಂಬ ಸುಪ್ರೀಂ ಕೋರ್ಟ್ ನಿರ್ದೇಶನ ಪಾಲನೆಗೆ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.
ಪ್ರಕರಣವೊಂದರಲ್ಲಿ ಸಿವಿಲ್ ಕೋರ್ಟ್ ನೀಡಿದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದು ಈ ಆದೇಶ ಹೊರಡಿಸಿದೆ.
ಅಭ್ಯರ್ಥಿಗಳು ಚುನಾವಣಾ ಆಯೋಗ ನೀಡುವ ಫಾರ್ಮ್ ತುಂಬಬೇಕು, ಬಾಕಿಯಿರುವ ಕ್ರಿಮಿನಲ್ ಕೇಸ್ಗಳ ವಿವರ ನೀಡಬೇಕು, ಟಿಕೆಟ್ ನೀಡುವ ರಾಜಕೀಯ ಪಕ್ಷಕ್ಕೂ ವಿವರ ಒದಗಿಸಬೇಕು, ಪಕ್ಷದ ವೆಬ್ ಸೈಟ್ನಲ್ಲೂ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ತಿಳಿಸಬೇಕು. ಪತ್ರಿಕೆಗಳಲ್ಲೂ ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನೆಲೆ ಪ್ರಕಟಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಪೀಠ ಸೂಚನೆ ನೀಡಿದೆ.