ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನೆಲೆ ಬಹಿರಂಗಪಡಿಸಬೇಕು: ಹೈಕೋರ್ಟ್

Prasthutha|

ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಬಹಿರಂಗಪಡಿಸಬೇಕು ಎಂಬ ಸುಪ್ರೀಂ ಕೋರ್ಟ್ ನಿರ್ದೇಶನ ಪಾಲನೆಗೆ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.

- Advertisement -

ಪ್ರಕರಣವೊಂದರಲ್ಲಿ ಸಿವಿಲ್ ಕೋರ್ಟ್ ನೀಡಿದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದು ಈ ಆದೇಶ ಹೊರಡಿಸಿದೆ.

ಅಭ್ಯರ್ಥಿಗಳು ಚುನಾವಣಾ ಆಯೋಗ ನೀಡುವ ಫಾರ್ಮ್ ತುಂಬಬೇಕು, ಬಾಕಿಯಿರುವ ಕ್ರಿಮಿನಲ್ ಕೇಸ್​ಗಳ ವಿವರ ನೀಡಬೇಕು, ಟಿಕೆಟ್ ನೀಡುವ ರಾಜಕೀಯ ಪಕ್ಷಕ್ಕೂ ವಿವರ ಒದಗಿಸಬೇಕು, ಪಕ್ಷದ ವೆಬ್ ಸೈಟ್​ನಲ್ಲೂ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ‌ ತಿಳಿಸಬೇಕು. ಪತ್ರಿಕೆಗಳಲ್ಲೂ ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನೆಲೆ ಪ್ರಕಟಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಪೀಠ ಸೂಚನೆ ನೀಡಿದೆ.

Join Whatsapp