‘ಒಂದು ರಾಷ್ಟ್ರ, ಒಂದು ಚುನಾವಣೆ’ಯನ್ನು ಒಪ್ಪಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ ಪತ್ರ

Prasthutha|

ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಯನ್ನು ನಾನು ಒಪ್ಪಲು ಸಾಧ್ಯವಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಈ ಕುರಿತ ಉನ್ನತ ಮಟ್ಟದ ಸಮಿತಿಗೆ ಪತ್ರ ಬರೆದು ಮಮತಾ ಬ್ಯಾನರ್ಜಿ ಹೀಗೆ ಹೇಳಿದ್ದಾರೆ.

- Advertisement -

ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತ ಉನ್ನತ ಮಟ್ಟದ ಸಮಿತಿಗೆ ಪತ್ರ ಬರೆದ ಸಿಎಂ ಮಮತಾ ಬ್ಯಾನರ್ಜಿ, ಇದು ಭಾರತದ ಸಾಂವಿಧಾನಿಕ ವ್ಯವಸ್ಥೆಗಳ ಮೂಲ ರಚನೆಗೆ ವಿರುದ್ಧವಾಗಿದೆ ಎಂದೂ ಹೇಳಿದ್ದಾರೆ.

ಸಮಿತಿ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ, ಅವರು 1952ರಲ್ಲಿ ಮೊದಲ ಸಾರ್ವತ್ರಿಕ ಚುನಾವಣೆಗಳನ್ನು ಕೇಂದ್ರ ಮತ್ತು ರಾಜ್ಯ ಮಟ್ಟಗಳಿಗೆ ಏಕಕಾಲದಲ್ಲಿ ನಡೆಸಲಾಯಿತು ಎಂದು ಬ್ಯಾನರ್ಜಿ ಹೇಳಿದ್ದಾರೆ.

- Advertisement -

ಕೆಲವು ವರ್ಷಗಳವರೆಗೆ ಅಂತಹ ಹೋಲಿಕೆ ಇತ್ತು. ಆದರೆ ಅಂದಿನಿಂದ ಸಹಬಾಳ್ವೆಯು ಛಿದ್ರಗೊಂಡಿದೆ ಎಂದು ಮಮತಾ ಹೇಳಿದ್ದಾರೆ.



Join Whatsapp