‘ಕ್ರೈಸ್ತ, ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ದಲಿತರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ನೀಡಲು ಸಾಧ್ಯವಿಲ್ಲ’: ಕೇಂದ್ರ ಸರ್ಕಾರ

Prasthutha|

ಹೊಸದಿಲ್ಲಿ: ಕ್ರೈಸ್ತ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ದಲಿತರು ಪರಿಶಿಷ್ಟ ಜಾತಿಯ ಸ್ಥಾನಮಾನದಿಂದ ವಂಚಿತರಾಗಿದ್ದಾರೆ.  

- Advertisement -

ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದ್ದು, ಕ್ರೈಸ್ತ, ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ದಲಿತರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.  

“ಕ್ರೈಸ್ತ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ದಲಿತರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ನೀಡಲು ಸಾಧ್ಯವಿಲ್ಲ. ಒಂದು ವೇಳೆ ಮೀಸಲಾತಿ ನೀಡಿದರೆ, ಹಿಂದೂ ಧರ್ಮದಲ್ಲಿರುವ ಪರಿಶಿಷ್ಟ ಜಾತಿಯ ಜನರಿಗೆ ತೊಂದರೆಯಾಗುತ್ತದೆ” ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಹೇಳಿದೆ.

- Advertisement -

ದಲಿತ ಕ್ರಿಶ್ಚಿಯನ್ನರು ಮತ್ತು ದಲಿತ ಮುಸ್ಲಿಮರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ನೀಡಬೇಕು ಎಂದು ಕೋರಿ ಸ್ವಯಂಸೇವಾ ಸಂಸ್ಥೆಯೊಂದು ಸಲ್ಲಿಸಿದ್ದ ಪಿಐಎಲ್‌ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌ ಪೀಠವು, ನಿಲುವು ಸ್ಪಷ್ಟಪಡಿಸಲು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು.



Join Whatsapp