ವಿಐಪಿ ಸೌಲಭ್ಯದಲ್ಲಿ ಚಿಕಿತ್ಸೆ ಸಾಧ್ಯವಿಲ್ಲ : ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಮನವಿಯನ್ನು ತಿರಸ್ಕರಿಸಿದ ಸುಪ್ರೀಮ್ ಕೋರ್ಟ್

Prasthutha|

ನವದೆಹಲಿ: 1984 ರಲ್ಲಿ ನಡೆದ ಸಿಖ್ ವಿರೋಧಿ ದಂಗೆಯ ಪ್ರಮುಖ ರೂವಾರಿ ಮತ್ತು ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಸಜ್ಜನ್ ಕುಮಾರ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಮ್ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

- Advertisement -

ವೈದ್ಯಕೀಯ ನೆರವಿನ ಅಧಾರದಲ್ಲಿ ಅವರಿಗೆ ಮಧ್ಯಂತರ ಜಾಮೀನು ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ಅವರ ಆರೋಗ್ಯ ಸ್ಥಿತಿಯಲ್ಲಿ ಸ್ಥಿರತೆ ಮತ್ತು ಸುಧಾರಣೆಯ ಹಿನ್ನೆಲೆಯಲ್ಲಿ ಅರ್ಜಿಯನ್ನು ತಿರಸ್ಕರಿಸಲಾಗಿಯೆಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಅವರು ತಮ್ಮ ಸ್ವಂತ ವೆಚ್ಚದಲ್ಲಿ ಹೆಸರಾಂತ ಆಸ್ಪತ್ರೆಯಾದ ಮೆದಂತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್ ಮತ್ತು ಎಮ್.ಎಮ್. ಸುಂದ್ರೇಶ್ ರವನ್ನೊಳಗೊಂಡ ಪೀಠವು ಘೋರ ಅಪರಾಧಗಳ ಆರೋಪಿಯಾಗಿರುವ ಆತನನ್ನು ಗಣ್ಯರಂತೆ ಪರಿಗಣಿಸುತ್ತೀರ ಎಂದು ಆರೋಪಿ ಪರ ವಕೀಲರನ್ನು ಪ್ರಶ್ನಿಸಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಸಜ್ಜನ್ ಕುಮಾರ್ ಅವರನ್ನು ಜೈಲಿನಿಂದ ಬಿಡುಗಡೆಗೊಳಿಸಬೇಕೆಂದು ಸುಪ್ರೀಂ ಕೋರ್ಟ್ ಗೆ ಅರೋಪಿ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಅವರ ಅರೋಗ್ಯ ಸ್ಥಿತಿಗತಿಯನ್ನು ಪತ್ತೆಹಚ್ಚಲು ಸೆಪ್ಟೆಂಬರ್ 6 ರ ಮೊದಲು ಮಧ್ಯಂತರ ಜಾಮೀನು ಅರ್ಜಿಗೆ ಉತ್ತರಿಸುವ ಅಫಿಡವಿಟ್ ಸಲ್ಲಿಸುವಂತೆ ನ್ಯಾಯಾಲಯವು ಸಿಬಿಐಗೆ ಸೂಚಿಸಿತ್ತು.

- Advertisement -

75 ವರ್ಷದ ಮಾಜಿ ಕಾಂಗ್ರೆಸ್ ನಾಯಕ ದೆಹಲಿಯ ರಾಜ್ ನಗರದಲ್ಲಿ ಒಂದು ಕುಟುಂಬದ ಐವರನ್ನು ಬರ್ಬರವಾಗಿ ಹತ್ಯೆ ನಡೆಸಿದ್ದರು. ಮಾತ್ರವಲ್ಲದೆ ನವೆಂಬರ್ 1, 1984 ರಂದು ಗುರುದ್ವಾರಕ್ಕೆ ಬೆಂಕಿ ಹಚ್ಚಿದ ಆರೋಪದಲ್ಲಿ ಶಿಕ್ಷೆಗೊಳಗಾಗಿದ್ದರು.

Join Whatsapp