ಬೆಂಗಳೂರು: ಬೆಂಗಳೂರಿನಲ್ಲಿ ವಾಹನ ದಟ್ಟಣೆ ತಪ್ಪಿಸಲು ಶಾಲಾ-ಕಾಲೇಜು ಮತ್ತು ಕಾರ್ಖಾನೆಗಳ ಸಮಯ ಬದಲಾವಣೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸಲಹೆ ನೀಡಿತ್ತು. ಇದೀಗ ಶಾಲೆ ಹಾಗೂ ಕೈಗಾರಿಕೆಗಳ ಸಮಯ ಬದಲಾವಣೆ ಸಾಧ್ಯವಿಲ್ಲ ಎಂದು ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಹೈಕೋರ್ಟ್ ಗೆ ವರದಿ ಸಲ್ಲಿಸಿದೆ.
ಕೈಗಾರಿಕೆಗಳ ಸಮಯ ಬದಲಾವಣೆಯಿಂದ ದಟ್ಟಣೆ ಕಡಿಮೆಯಾಗುವುದಿಲ್ಲ. ಶಿಫ್ಟ್ಗಳಲ್ಲಿ ಕಾರ್ಮಿಕರು ಕೆಲಸ ಮಾಡುವುದರಿಂದ ದಟ್ಟಣೆಗೆ ಕಾರಣವಾಗುವುದಿಲ್ಲ. ಇನ್ನು ಮಕ್ಕಳನ್ನು ನಿದ್ರೆಯಿಂದ ಬೇಗ ಎಚ್ಚರಿಸಿದರೆ ನಿದ್ರಾಹೀನತೆ ಸಮಸ್ಯೆ ಉಂಟಾಗುವುದು. ಆರೋಗ್ಯಕರ ಉಪಾಹಾರ ಸೇವನೆಗೂ ಸಮಯ ಸಿಗುವುದಿಲ್ಲ. ಹೀಗಾಗಿ ಶಾಲೆಗಳ ಬಳಿ ದಟ್ಟಣೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.