Home ಟಾಪ್ ಸುದ್ದಿಗಳು ಗಾಂಧಿ ಕುಟುಂಬದ ಹೆಸರು ಬಳಸಿ ರಾಜಕೀಯಕ್ಕೆ ಬರಲ್ಲ: ರಾಬರ್ಟ್‌ ವಾದ್ರಾ

ಗಾಂಧಿ ಕುಟುಂಬದ ಹೆಸರು ಬಳಸಿ ರಾಜಕೀಯಕ್ಕೆ ಬರಲ್ಲ: ರಾಬರ್ಟ್‌ ವಾದ್ರಾ

ನವದೆಹಲಿ: ರಾಜಕೀಯ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಪತಿ ರಾಬರ್ಟ್‌ ವಾದ್ರಾ, ಗಾಂಧಿ ಕುಟುಂಬದ ಹೆಸರು ಬಳಸಿ ರಾಜಕೀಯಕ್ಕೆ ಬರಲ್ಲ ಎಂದಿದ್ದಾರೆ. ನನ್ನ ಹೆಸರು, ನನ್ನ ಕೆಲಸದಿಂದ ರಾಜಕೀಯ ಪ್ರವೇಶಿಸುತ್ತೇನೆ ಎಂದಿದ್ದಾರೆ.

ನೀವು ರಾಜಕೀಯ ಪ್ರವೇಶಿಸಲು ಬಯಸುತ್ತೀರಾ ಎಂಬ ಪ್ರಶ್ನೆಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿಸ ಅವರು, ನಾನು ದೇಶದ ಸೇವೆ ಮಾಡುತ್ತಿದ್ದೇನೆ. ನಾನು ರಾಜಕೀಯ ಪ್ರವೇಶಿಸುವುದಿದ್ದರೆ, ನನ್ನ ಸಮಾಜ ಸೇವೆ, ನನ್ನ ಕೆಲಸ ಹಾಗೂ ನನ್ನ ಹೆಸರು ಬಳಸಿ ಪ್ರವೇಶಿಸುತ್ತೇನೆ. ಗಾಂಧಿ ಕುಟುಂಬದ ಹೆಸರು ಬಳಸಿಕೊಂಡು ನಾನು ರಾಜಕೀಯ ಪ್ರವೇಶಿಸುವುದಿಲ್ಲ. ಹೀಗೆ ಹೇಳಿದ ನಾನು ಗಾಂಧಿ ಕುಟುಂಬದ ಸದಸ್ಯ ಅಲ್ಲ ಎಂಬ ಅರ್ಥವಲ್ಲ. ಆದರೆ, ನನ್ನ ಹೆಸರು ಬಳಸಿಯೇ ನಾನು ರಾಜಕೀಯ ಪ್ರವೇಶಿಸುತ್ತೇನೆ’ ಎಂದು ಹೇಳಿದ್ದಾರೆ.

ರಾಜಕೀಯದಲ್ಲಿ ಬದಲಾವಣೆಯಾಗಬೇಕಿದೆ. ನಾನು ರೈತರು, ಬಡವರ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಹೌದು, ಸೋನಿಯಾ ಗಾಂಧಿ ಸೇರಿ ಗಾಂಧಿ ಕುಟುಂಬದ ಹೆಸರು ಬಳಸಿದರೆ, ಅವರಿಂದ ಸಲಹೆ ಪಡೆದರೆ ನನಗೆ ಅನುಕೂಲವಾಗಬಹುದು. ಆದರೆ, ನನ್ನ ಕೆಲಸದಿಂದ ನಾನು ರಾಜಕೀಯಕ್ಕೆ ಬರಲು ಇಷ್ಟಪಡುತ್ತೇನೆ. ಹಾಗಂತ, ರಾಜಕೀಯ ಪ್ರವೇಶಿಸಲು ನಾನು ಸಮಾಜ ಸೇವೆ ಮಾಡುತ್ತಿಲ್ಲ. ಸೇವೆಯು ನನಗೆ ಖುಷಿ ಕೊಡುವ ವಿಚಾರವಾಗಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ವಿರುದ್ಧ ಕೂಡ ರಾಬರ್ಟ್‌ ವಾದ್ರಾ ವಾಗ್ದಾಳಿ ನಡೆಸಿದ ಅವರು, ಕಳೆದ 10 ವರ್ಷಗಳಿಂದ ದೇಶದ ರಾಜಕೀಯ ವ್ಯವಸ್ಥೆಯನ್ನು ಜನ ನೋಡಿದ್ದಾರೆ. ಅಭಿವೃದ್ಧಿ ಹೊರತುಪಡಿಸಿ, ಧರ್ಮದ ಆಧಾರದ ಮೇಲೆ ರಾಜಕೀಯ ನಡೆಯುತ್ತಿದೆ. ನಾನು ಉದ್ಯಮದಲ್ಲಿ ತೊಡಗಿಸಿಕೊಳ್ಳಲು ಬಿಡುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಇ.ಡಿ ದಾಳಿ ನಡೆಯುತ್ತದೆ. ಆದರೆ, ಇದೆಲ್ಲದರ ಮಧ್ಯೆ ನಾನು ಸೇವೆ ಮುಂದುವರಿಸಿದ್ದೇನೆ. ನಾನು ರಾಜಕೀಯಕ್ಕೆ ಬಂದ ತಕ್ಷಣ ಎಲ್ಲವೂ ಬದಲಾಗಲಿದೆ ಎಂದು ಹೇಳುವುದಿಲ್ಲ. ಸೇವೆಗಾಗಿ ನಾನು ರಾಜಕೀಯ ಪ್ರವೇಶಿಸಲು ಬಯಸುತ್ತೇನೆ ಎಂದು ಹೇಳಿದರು.

Join Whatsapp
Exit mobile version