ದೇಶ ಆರ್ಥಿಕ ಸಂಕಷ್ಟದಲ್ಲಿರುವಾಗ ಕೋವಿಡ್ ನಿರ್ಬಂಧ ಹೇರಿಕೆ ಸರಿಯಲ್ಲ: ಮಮತಾ ಬ್ಯಾನರ್ಜಿ

Prasthutha|

ಕೋಲ್ಕತ್ತಾ: ದೇಶ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ ನಿರ್ಬಂಧಗಳನ್ನು ಹೇರುವ ಪ್ರಯತ್ನ ಸರಿಯಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಹೇಳಿದ್ದಾರೆ.

- Advertisement -

ಮುಂದಿನ ತಿಂಗಳು ಪ್ರಾರಂಭವಾಗುವ ವಾರ್ಷಿಕ ಗಂಗಾ ಸಾಗರ ಮೇಳ ಹಿನ್ನೆಲೆಯಲ್ಲಿ ದಕ್ಷಿಣ ಪರಗಣ ಜಿಲ್ಲೆಯ ಸಾಗರ್ ದ್ವೀಪಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ಕೋಲ್ಕತ್ತಾದಲ್ಲಿ ಜನರು ಸಾರಿಗೆಗಾಗಿ ರೈಲನ್ನು ಆಶ್ರಯಿಸುವುದರಿಂದ ಕೋವಿಡ್ ಪ್ರಕರಣಗಳು ಜಾಸ್ತಿಯಾಗಿವೆ ಎಂದು ತಿಳಿಸಿದರು.

ಯುರೋಪ್ ನಿಂದ ಆಗಮಿಸಿದವರಲ್ಲಿ ಹೆಚ್ಚಿನ ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗುತ್ತಿವೆ. ಓಮಿಕ್ರಾನ್ ವೈರಸ್ ಅಂತಾರಾಷ್ಟ್ರೀಯ ವಿಮಾನಗಳ ಮೂಲಕ ಬರುತ್ತಿರುವುದು ಸತ್ಯ. ಈ ನಿಟ್ಟಿನಲ್ಲಿ ಓಮಿಕ್ರಾನ್ ವ್ಯಾಪಕವಾಗಿರುವ ದೇಶಗಳಿಂದ ಆಗಮಿಸುವ ವಿಮಾನಗಳ ಮೇಲೆ ನಿರ್ಬಂಧ ಹೇರುವ ಬಗ್ಗೆ ಕೇಂದ್ರ ಚಿಂತಿಸಬೇಕು ಎಂದು ಅವರು ತಿಳಿಸಿದರು.

- Advertisement -

ಪಶ್ಚಿಮ ಬಂಗಾಳದಲ್ಲಿ ಬುಧವಾರ ಕೋವಿಡ್ ಪ್ರಕರಣಗಳಲ್ಲಿ ತೀವ್ರ ಏರಿಕೆ ಕಂಡುಬಂದಿದ್ದು, 1089 ಸೋಂಕು ಪತ್ತೆಯಾಗಿದೆ. ಕೋಲ್ಕತ್ತಾದಲ್ಲಿ 540 ಹೊಸ ಪ್ರಕರಣಗಳು ವರದಿಯಾಗಿವೆ.



Join Whatsapp