Home ಟಾಪ್ ಸುದ್ದಿಗಳು ಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ನೀಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ನೀಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದೆಹಲಿ: ಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.


ಲೋಕಸಭೆ ಚುನಾವಣೆ ಘೋಷಣೆಯಾಗಿದೆ. ಈ ಸಮಯದಲ್ಲಿ ನಾವು ಈ ರೀತಿ ಮಾಡಿದರೆ ಅವ್ಯವಸ್ಥೆಯನ್ನು ಸೃಷ್ಟಿಸುತ್ತದೆ ಎಂದು ಸುಪ್ರೀಂ ಹೇಳಿದೆ. ಈಗಾಗಲೇ ನೇಮಕಗೊಂಡ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ವಿರುದ್ಧ ಯಾವುದೇ ಆರೋಪಗಳಿಲ್ಲ ಎಂದು ನ್ಯಾಯಾಲಯವು ಹೇಳಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ಚುನಾವಣಾ ಆಯೋಗವು ಕಾರ್ಯಾಂಗ ವ್ಯಾಪ್ತಿಯಲ್ಲಿ ಬರುತ್ತದೆ. ಹಾಗಾಗಿ ನಾವು ಇದನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Join Whatsapp
Exit mobile version