ದೆಹಲಿಯಲ್ಲಿ ಅಮಿತ್ ಶಾ ಭೇಟಿ ಮಾಡಿದ ಅಮರಿಂದರ್ ಸಿಂಗ್ !

Prasthutha|

ದೆಹಲಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ದೆಹಲಿಯಲ್ಲಿರುವ ಗೃಹ ಸಚಿವ ಅಮಿತ್ ಶಾ ನಿವಾಸದಲ್ಲಿ  ಅವರನ್ನು ಭೇಟಿಯಾಗಿದ್ದಾರೆ. ಈ ಮೂಲಕ  ಅಮರಿಂದರ್ ಬಿಜೆಪಿ ಸೇರಲಿದ್ದಾರೆ ಎಂಬ ಕುತೂಹಲ ಹುಟ್ಟಿಕೊಂಡಿದೆ.

- Advertisement -

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ ಬೆನ್ನಲ್ಲೇ ದೆಹಲಿ ತಲುಪಿದ ಅಮರಿಂದರ್, ನಾನು ಯಾರನ್ನೂ ಭೇಟಿಯಾಗುವ ಉದ್ದೇಶದಿಂದ ದೆಹಲಿಗೆ ಬಂದಿಲ್ಲ. ನಾನು ಯಾವ ನಾಯಕರನ್ನೂ ಭೇಟಿಯಾಗುವುದಿಲ್ಲ. ದೆಹಲಿಯ ಕಪುರ್ತಲದಲ್ಲಿರುವ ಪಂಜಾಬ್ ಮುಖ್ಯಮಂತ್ರಿಯ ಮನೆ ಖಾಲಿ ಮಾಡಲು ಬಂದಿದ್ದೇನೆ ಎಂದು ಹೇಳಿದ್ದರು.

Join Whatsapp