Home ಟಾಪ್ ಸುದ್ದಿಗಳು ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರದ ಚೆಕ್​ ಹಸ್ತಾಂತರ

ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರದ ಚೆಕ್​ ಹಸ್ತಾಂತರ

ಬೆಂಗಳೂರು: ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾಗಿರುವ ಬೆಂಗಳೂರಿನ ಕ್ಯಾಪ್ಟನ್‌ ಪ್ರಾಂಜಲ್‌ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂ ಪರಿಹಾರ ಧನ ಮಂಜೂರು ಮಾಡಿ ಆದೇಶ ಹೊರಡಿಸಿದ್ದು, ಇಂದು ಅವರ ಕುಟುಂಬಕ್ಕೆ ಪರಿಹಾರದ ಚೆಕ್​ ಹಸ್ತಾಂತರಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಜಮ್ಮು- ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ ಗೌರವವಿದೆ. ಹುತಾತ್ಮ ಯೋಧ ಪ್ರಾಂಜಲ್ ಅವರ ತ್ಯಾಗ, ಬಲಿದಾನಕ್ಕೆ ಬೆಲೆಕಟ್ಟಲಾಗದು, ಆದರೆ ದೇಶದ ಕೋಟ್ಯಂತರ ಜನರ ಪರವಾಗಿ ಈ ಹೊತ್ತಿನಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾದುದ್ದು ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಪರಿಹಾರಧನದ ಚೆಕ್ ಅನ್ನು ಸಿದ್ಧಪಡಿಸಲಾಗಿದ್ದು ಮೃತ ಯೋಧನ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಮತ್ತೊಮ್ಮೆ ಕ್ಯಾಪ್ಟನ್ ಪ್ರಾಂಜಲ್ ಅವರ ಅನನ್ಯ ದೇಶಸೇವೆ, ಸಮರ್ಪಣಾಭಾವವನ್ನು ಗೌರವದಿಂದ ಸ್ಮರಿಸುತ್ತಾ, ಗೌರವ ನಮನ ಸಲ್ಲಿಸುತ್ತೇನೆ ” ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

Join Whatsapp
Exit mobile version