ಬೆಳಗಾವಿ: ಹುಕ್ಕೇರಿ ತಾಲೂಕಿನ ಎಲಿಮುನ್ನೋಳಿ ಗ್ರಾಮದ ಮದುವೆ ಸಮಾರಂಭದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ್ದ ಮಾಜಿ ಸೈನಿಕನನ್ನು ಪೊಲೀಸರು ಬಂಧಿಸಿದ್ದಾರೆ.
ಮಾಜಿ ಸೈನಿಕ ಮುಹಮ್ಮದ್ ರಫೀಕ್ ಬಂಧಿತ ಆರೋಪಿ. ಗುಂಡು ಹಾರಿಸಿದ್ದರಿಂದ ಮದುವೆ ಸಮಾರಂಭಕ್ಕೆ ಆಗಮಿಸಿದ್ದ ಜನರಲ್ಲಿ ಕೆಲ ಕಾಲ ಆತಂಕ ಮೂಡಿಸಿತ್ತು.
ಹುಕ್ಕೇರಿ ತಾಲೂಕಿನ ಎಲಿಮನ್ನೋಳಿ ಗ್ರಾಮದ ಆಯಾಜ ಮಲ್ಲಿಕ ತಹಶೀಲ್ದಾರ್ ಎಂಬುವವರ ಮದುವೆ ಸಮಾರಂಭದಲ್ಲಿ ಈ ಘಟನೆ ನಡೆದಿದೆ. ಮದುವೆ ಸಮಾರಂಭಕ್ಕೆ ಆಗಮಿಸಿದ್ದ ಮಾಜಿ ಸೈನಿಕ ರಫೀಕ್ ಸಾಹೆಬ್ ತಹಶೀಲ್ದಾರ್ ಎಂಬವರು ತನ್ನ ಪಿಸ್ತೂಲಿನಿಂದ ಐದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ಗನ್ ಲೈಸನ್ಸ್ ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆ ಸ್ವಯಂ ಪ್ರಕರಣ ದಾಖಲಿಸಿಕೊಂಡ ಹುಕ್ಕೇರಿ ಪೋಲಿಸರು ಮಹಮ್ಮದ್ ರಫೀಕ್ ಅವರನ್ನು ಬಂಧಿಸಿದ್ದಾರೆ.