ಕಾರು-ಟ್ರಕ್​ ನಡುವೆ ಅಪಘಾತ: 6 ಮಂದಿ ಸಾವು, ನಾಲ್ವರಿಗೆ ಗಾಯ

Prasthutha|

- Advertisement -

ಕಾರಿಗೆ ಟ್ರಕ್​ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ತೆಲಂಗಾಣದಿಂದ ಸುಮಾರು 180 ಕಿಮೀ ದೂರದಲ್ಲಿರುವ ಕೊಡದ ಪಟ್ಟಣದ ಬಳಿ ಈ ಘಟನೆ ಸಂಭವಿಸಿದ್ದು, ಹತ್ತು ವ್ಯಕ್ತಿಗಳೊಂದಿಗೆ ಹತ್ತಿದ ಕಾರು ಹೈದರಾಬಾದ್-ವಿಜಯವಾಡ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಟ್ರಕ್‌ ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp