ಚಾಲಕನ ನಿಯಂತ್ರಣ ತಪ್ಪಿ ಫ್ಲೈ ಓವರ್‌ನಲ್ಲೇ ಕಾರು ಪಲ್ಟಿ; ಓರ್ವ ಸ್ಥಳದಲ್ಲೇ ಮೃತ್ಯು

Prasthutha|

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಫ್ಲೈ ಓವರ್‌ನಲ್ಲೇ ಕಾರು ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದ ಸಮೀಪ ನಡೆದಿದೆ.

- Advertisement -

ಬೆಂಗಳೂರು ಮೂಲದ ಧೀರಜ್ (18) ಮೃತಪಟ್ಟವರು. ಕಾರಿನಲ್ಲಿದ್ದ ಜಗದೀಶ್, ನಳಿನಾಕ್ಷಿ, ದುಷ್ಯಂತ್‌ ಗಂಭೀರವಾಗಿ ಗಾಯಗೊಂಡಿದ್ದು, ಮೂವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಬೆಂಗಳೂರಿನಿಂದ ಹಾಸನದ ಕಡೆಗೆ ಸ್ವಿಫ್ಟ್ ಕಾರಿನಲ್ಲಿ ಬರುತ್ತಿದ್ದ ವೇಳೆ ಅತಿ ವೇಗವಾಗಿ ಕಾರು ಚಾಲನೆ ಮಾಡುತ್ತಿದ್ದರಿಂದ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ಇದರಿಂದ ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ನಾಲ್ಕೈದು ಬಾರಿ ಕಾರು ಪಲ್ಟಿಯಾಗಿದೆ. ಪಲ್ಟಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಆದ್ರೆ ಕೂದಲೆಳೆ ಅಂತರದಲ್ಲಿ ಕಾರು ಫ್ಲೈಓವರ್‌ನಿಂದ ಕೆಳಗೆ ಬೀಳುವುದು ತಪ್ಪಿದೆ.

- Advertisement -

ಗಾಯಗೊಂಡವರ ಸ್ಥಿತಿ ಗಂಭೀರವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp