ಕಾರು ಅಪಘಾತಕ್ಕೆ ಮಹಿಳೆ‌ ಬಲಿ: ನಟ ನಾಗಭೂಷಣ್ ಬಂಧನ

Prasthutha|

- Advertisement -

ಬೆಂಗಳೂರು: ಕಾರು ಅಪಘಾತದಲ್ಲಿ ಮಹಿಳೆಯೊಬ್ಬರ ಸಾವಿಗೆ ಕಾರಣರಾದ ನಟ ನಾಗಭೂಷಣ್ ಅವರನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಕೆಲವೇ ಗಂಟೆಗಳಲ್ಲಿ ಅವರನ್ನು ಕೋರಮಂಗಲದಲ್ಲಿರುವ ಜಡ್ಜ್ ಮುಂದೆ ಹಾಜರುಪಡಿಸುವುದಾಗಿ ತಿಳಿದು ಬಂದಿದೆ. ನಾಗಭೂಷಣ್ ಅವರು ಕೂಡ ಸ್ವತಃ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.

- Advertisement -

ಶೂಟಿಂಗ್ ಮುಗಿಸಿಕೊಂಡು ನಾಗಭೂಷಣ್ ಬರುವಾಗ ರಸ್ತೆಯಲ್ಲಿ ಅಡ್ಡಬಂದ ಪಾದಚಾರಿ ದಂಪತಿಗಳಾದ ಪ್ರೇಮಾ ಮತ್ತು ಕೃಷ್ಣ ಅವರಿಗೆ ಕಾರು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ದಂಪತಿಗಳಿಬ್ಬರಿಗೂ ತೀವ್ರ ಗಾಯವಾಗಿದ್ದು, ಗಾಯಾಳುಗಳನ್ನು ಖುದ್ದಾಗಿ ನಾಗಭೂಷಣ್ ಅವರೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ. ಪ್ರೇಮಾ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಪತಿ ಕೃಷ್ಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Join Whatsapp