ಸುಳ್ಯ; ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಪಂಜ ಸಮೀಪದ ಬಳ್ಪದ ಎಡೋಣಿ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.
ಪಂಜದ ಕೇಶವ ಆಚಾರಿ ಎಂಬವರು ತಮ್ಮ ಕಾರಿನಲ್ಲಿ ಏನೆಕಲ್ಲು ಕಡೆಯಿಂದ ಕೆಲಸ ಮುಗಿಸಿ ಬರುತ್ತಿದ್ದ ವೇಳೆ ಪಾದೆ ಎಂಬಲ್ಲಿ ತಲುಪುತ್ತಿದ್ದಂತೆ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಿಂದ ಇಳಿದ ಅವರು ಬೋನೆಟ್ ತೆರೆಯುವಷ್ಟರಲ್ಲಿ ಬೆಂಕಿ ಹತ್ತಿಕೊಂಡು ಕಾರು ಸಂಪೂರ್ಣ ಹೊತ್ತಿ ಉರಿದಿದೆ. ಆಚಾರಿ ಅವರ ಕಣ್ಣೆದುರೇ ಕಾರು ಸಂಪೂರ್ಣವಾಗಿ ಸುಟ್ಟು ಹೋಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ.