ಗಾಂಧಿನಗರ: ಕಾರು ಹಾಗೂ ಬಸ್ ಡಿಕ್ಕಿಯಾಗಿ ಸಂಭವಿಸಿ 10 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಗುಜರಾತ್ ನ ನವಸಾರಿ ಜಿಲ್ಲೆಯ ವೆಸ್ಮಾ ಬಳಿಯ ಹೆದ್ದಾರಿ 48 ರಲ್ಲಿ ನಡೆದಿದೆ.
ಅತಿವೇಗವಾಗಿ ಬಂದ ಫಾರ್ಚುನರ್ ಕಾರು ಡಿವೈಡರ್ಗೆ ಗುದ್ದಿ ಹಾರಿಬಿದ್ದು ಬಸ್ಗೆ ಅಪ್ಪಳಿಸಿದೆ. ಕಾರಿನಲ್ಲಿದ್ದ 9 ಜನರ ಪೈಕಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದ ಬಳಿಕ ಬಸ್ ಚಾಲಕನ ಮೇಲೆ ಹಲ್ಲೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಆತ ಆಸ್ಪತ್ರೆಯಲ್ಲಿ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದಾನೆ.
ಬಸ್ಸಿನಲ್ಲಿದ್ದ 30 ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಗಂಭೀರ ಗಾಯಗೊಂಡ 11 ಮಂದಿಯನ್ನು ನವಸಾರಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಕಾರಿನಲ್ಲಿದ್ದ ಓರ್ವನನ್ನು ಸೂರತ್ನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಕಾರಿನಲ್ಲಿದ್ದವರು ಗುಜರಾತ್ ನ ಆಂಗಲೇಶ್ವರ ಪ್ರದೇಶದ ನಿವಾಸಿಗಳಾಗಿದ್ದಾರೆ. ಅಪಘಾತದ ಬಳಿಕ ಬಸ್ ಹಾಗೂ ಕಾರನ್ನು ಕ್ರೇನ್ ಮೂಲಕ ತೆರೆವು ಮಾಡಿದ್ದೇವೆ. ಅಫಘಾತದ ರಭಸಕ್ಕೆ ಕಾರು ನುಜ್ಜುಗಾಗಿದ್ದರೆ ಬಸ್ನ ಮುಂಭಾಗ ಪೂರ್ಣ ಜಖಂಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.