ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲಿಯೇ 6 ಮಂದಿ ಮೃತ್ಯು

Prasthutha|

ಕೊಪ್ಪಳ: ಲಾರಿ ಮತ್ತು ಕಾರು ನಡುವೆ ಅಪಘಾತ ಉಂಟಾಗಿದ್ದು, ಸ್ಥಳದಲ್ಲಿಯೇ ಆರು ಮಂದಿ ಮೃತಪಟ್ಟ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ನಡಿದೆ.

- Advertisement -

ಕಾರಿನ ಟೈರ್​ ಸ್ಫೋಟಗೊಂಡು ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದವರು ಮೃತಪಟ್ಟಿದ್ದಾರೆ. ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ ಮತ್ತು ರಶ್ಮಿಕಾ ಮೃತರು.

ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

- Advertisement -

ಡಿಕ್ಕಿಯ ರಭಸಕ್ಕೆ ಇಂಡಿಕಾ ಕಾರು ನಜ್ಜುಗುಜ್ಜಾಗಿದೆ. ವಿಜಯಪುರದಿಂದ ಬೆಂಗಳೂರಿಗೆ ಹೊರಟಿದ್ದಾಗ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

Join Whatsapp