Home ಜಾಲತಾಣದಿಂದ ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲಿಯೇ 6 ಮಂದಿ ಮೃತ್ಯು

ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲಿಯೇ 6 ಮಂದಿ ಮೃತ್ಯು

ಕೊಪ್ಪಳ: ಲಾರಿ ಮತ್ತು ಕಾರು ನಡುವೆ ಅಪಘಾತ ಉಂಟಾಗಿದ್ದು, ಸ್ಥಳದಲ್ಲಿಯೇ ಆರು ಮಂದಿ ಮೃತಪಟ್ಟ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ನಡಿದೆ.

ಕಾರಿನ ಟೈರ್​ ಸ್ಫೋಟಗೊಂಡು ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದವರು ಮೃತಪಟ್ಟಿದ್ದಾರೆ. ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ ಮತ್ತು ರಶ್ಮಿಕಾ ಮೃತರು.

ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಡಿಕ್ಕಿಯ ರಭಸಕ್ಕೆ ಇಂಡಿಕಾ ಕಾರು ನಜ್ಜುಗುಜ್ಜಾಗಿದೆ. ವಿಜಯಪುರದಿಂದ ಬೆಂಗಳೂರಿಗೆ ಹೊರಟಿದ್ದಾಗ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

Join Whatsapp
Exit mobile version