ಲಾರಿಗೆ ಕಾರು ಡಿಕ್ಕಿ: ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

Prasthutha|

- Advertisement -

ಮಂಡ್ಯ: ಬೆಂಗಳೂರು ಕಡೆಯಿಂದ ಚನ್ನರಾಯಪಟ್ಟಣ ಕಡೆಗೆ ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾಗಿ, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಮಲಾಪುರ ಬಳಿ ನಡೆದಿದೆ.

ಹೇಮಂತ್, ನವೀನ್, ಶರತ್ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

- Advertisement -

ಮೃತದೇಹಗಳು ಬಿ.ಜಿ ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದ್ದು, ಸ್ಥಳಕ್ಕೆ ಬೆಳ್ಳೂರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp