ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರ ಮುಂಗಾವಲು ವಾಹನಕ್ಕೆ ಎದುರಿನಿಂದ ಬಂದ ಕಾರೊಂದು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಇಂದು ತುಮಕೂರು ನಗರದಲ್ಲಿ ಸ್ವಾತಂತ್ರ್ಯ ಸಮಾರಂಭದಲ್ಲಿ ಭಾಗವಹಿಸಿ, ತಮ್ಮ ವಿಧಾನಸಭಾ ಕ್ಷೇತ್ರ ತೀರ್ಥಹಳ್ಳಿ ಗೆ ತೆರಳುವ ಮಾರ್ಗದಲ್ಲಿ, ಉಂಬಳೇಬೈಲ್ ಗ್ರಾಮದ ತಿರುವಿನಲ್ಲಿ, ಘಟನೆ ಸಂಭವಿಸಿದೆ.
ಘಟನೆಯಲ್ಲಿ ಪೊಲೀಸ್ ವಾಹನಕ್ಕೆ ಹಾನಿ ಸಂಭವಿಸಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಘಟನೆಯ ನಂತರ, ಸಚಿವರು, ತಮ್ಮ ವಾಹನದಲ್ಲಿ, ಡಿಕ್ಕಿಯಾದ ವಾಹನದಲ್ಲಿದ್ದ ಪ್ರಯಾಣಿಕರನ್ನು ಹಾಗೂ ಸಿಬ್ಬಂದಿಯನ್ನು ಸುರಕ್ಷಿತವಾಗಿ, ತಲುಪಿಸಿದ್ದಾರೆ.