KSRTC ಬಸ್ ಗೆ ಕಾರು ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು

Prasthutha|

ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ಗೆ ಕಾರು ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೇ ದುರ್ಮರಣ ಹೊಂದಿರುವ ದುರ್ಘಟನೆ ಯಲಹಂಕದ ಏರ್ಪೋರ್ಟ್ ರಸ್ತೆಯ ಬಿಎಸ್ ಎಫ್ ಕ್ಯಾಂಪಸ್ ಬಳಿ ಇಂದು ನಸುಕಿನಲ್ಲಿ ನಡೆದಿದೆ.

- Advertisement -

ಮಾಗಡಿ ಮೂಲದ ಲೋಹಿತ್ ಪ್ರಸಾದ್ (25) ಸಾವನ್ನಪ್ಪಿರುವ ದುರ್ದೈವಿ. ಪ್ರಯಾಣಿಕರನ್ನು ಕರೆದೊಯ್ಯಲು ಮಾರುತಿ ಡಿಸೈರ್ ಕಾರಿನಲ್ಲಿ ಲೋಹಿತ್ ಪ್ರಸಾದ್ ಮುಂಜಾನೆ 3.30ರ ಸುಮಾರಿಗೆ ವೇಗವಾಗಿ ಬರುತ್ತಿದ್ದಾಗ ಕಾರು ಡಿವೈಡರ್ ಗೆ ಹಾರಿ ಮುಂದಿನಿಂದ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಕಾರು ಜಖಂಗೊಂಡು ಚಾಲಕ ಲೋಹಿತ್ ಪ್ರಸಾದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

- Advertisement -

ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಯಲಹಂಕ ಸಂಚಾರ ಪೊಲೀಸ್ ಇನ್ಸ್ ಪೆಕ್ಟರ್ ರಾಮಕೃಷ್ಣ ರೆಡ್ಡಿ ಧಾವಿಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ ಎಂದು ಡಿಸಿಪಿ ಸವಿತಾ ತಿಳಿಸಿದ್ದಾರೆ.



Join Whatsapp