ಮರಕ್ಕೆ ಡಿಕ್ಕಿ ಹೊಡೆದ ಕಾರು: ಅಪ್ಪ, ಮಗ ಸಾವು

Prasthutha|

ಚಿಕ್ಕಮಗಳೂರು: ಧರ್ಮಸ್ಥಳ ದಿಂದಾ ದರ್ಶನ ಮುಗಿಸಿ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ
ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು ಪರಿಣಾಮ ತಂದೆ ಮಗ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಸಮೀಪದ ಮುತ್ತಿಗೆಪುರದಲ್ಲಿ ನಡೆದಿದೆ.

- Advertisement -

ಮೃತರನ್ನು ಬೆಂಗಳೂರಿನ ರಾಜಾಜಿನಗರ ಮೂಲದ ನರಸಿಂಹರಾಜ್ (58) ಮತ್ತು ಅವರ ಮಗ ಕಿರಣ್ (23) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಮೂಡಿಗೆರೆ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿದ್ದಾರೆ.



Join Whatsapp