Home ಟಾಪ್ ಸುದ್ದಿಗಳು ಮರಕ್ಕೆ ಡಿಕ್ಕಿ ಹೊಡೆದ ಕಾರು: ಅಪ್ಪ, ಮಗ ಸಾವು

ಮರಕ್ಕೆ ಡಿಕ್ಕಿ ಹೊಡೆದ ಕಾರು: ಅಪ್ಪ, ಮಗ ಸಾವು

ಚಿಕ್ಕಮಗಳೂರು: ಧರ್ಮಸ್ಥಳ ದಿಂದಾ ದರ್ಶನ ಮುಗಿಸಿ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ
ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು ಪರಿಣಾಮ ತಂದೆ ಮಗ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಸಮೀಪದ ಮುತ್ತಿಗೆಪುರದಲ್ಲಿ ನಡೆದಿದೆ.

ಮೃತರನ್ನು ಬೆಂಗಳೂರಿನ ರಾಜಾಜಿನಗರ ಮೂಲದ ನರಸಿಂಹರಾಜ್ (58) ಮತ್ತು ಅವರ ಮಗ ಕಿರಣ್ (23) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಮೂಡಿಗೆರೆ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿದ್ದಾರೆ.

Join Whatsapp
Exit mobile version