ಬಂಟ್ವಾಳ | ಕಾರುಗಳ ಮುಖಾಮುಖಿ: ಚಾಲಕ ಗಂಭೀರ

Prasthutha|

ಬಂಟ್ವಾಳ: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕನೋರ್ವ ಗಂಭೀರ ಗಾಯಗೊಂಡ ಘಟನೆ ಬಿಸಿರೋಡು ಪುಂಜಾಲಕಟ್ಟೆ ರಾಜ್ಯ ಹೆದ್ದಾರಿಯ ಬಡಗುಂಡಿ ಎಂಬಲ್ಲಿ ನಡೆದಿದೆ.

- Advertisement -


ನಯನಾಡು ನಿವಾಸಿ ಬ್ಯಾಪ್ಟಿಸ್ ಲೊಬೊ ಅವರ ಮಗ ಚಾಲಕ ರಾಕ್ ಲಿನ್ ಲೋಬೊ ( 26) ಗಂಭೀರವಾಗಿ ಗೊಂಡ ಕಾರು ಚಾಲಕ ಎಂದು ತಿಳಿದು ಬಂದಿದೆ.


ಮಂಗಳೂರಿನಿಂದ ಪುಂಜಾಲಕಟ್ಟೆ ನಯನಾಡು ಮನೆಗೆ ರಿಟ್ಝ್ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ, ವಾಮದಪದವಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಂಜೇಶ್ವರಕ್ಕೆ ಹೋಗುತ್ತಿದ್ದ ಎರಿಟಿಗ ಕಾರು ನಡುವೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

- Advertisement -


ಈ ಬಗ್ಗೆ ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp