ವಿಜಯಪುರ: ಕಾರು ಚಾಲಕನ ಸಾವಿನ ಬಗ್ಗೆ ಸಚಿವ ಮುರುಗೇಶ ನಿರಾಣಿ ತಮ್ಮ ವಿರುದ್ಧ ಮಾಡಿರುವ ಆರೋಪದ ಬಗ್ಗೆ ಸಿಐಬಿ ತನಿಖೆಗೆ ಒಪ್ಪಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿರುವುದಾಗಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.
ಸಂಪುಟದ ಸದಸ್ಯರು ಈ ರೀತಿ ಆರೋಪ ಮಾಡಿರುವ ಬಗ್ಗೆ ಸತ್ಯಾಸತ್ಯತೆ ತಿಳಿಯಲಿ. ಇನ್ನೂ ಇಂತಹ ಆರೋಪದಿಂದ ಸರ್ಕಾರದ ಬಗ್ಗೆ ತಪ್ಪು ಸಂದೇಶ ಬರುತ್ತದೆ. ದೇಶದ ಜನತೆಗೆ ಇದರ ಬಗ್ಗೆ ಸತ್ಯಾಸತ್ಯತೇ ಗೊತ್ತಾಗಬೇಕಿದೆ ಎಂದರು.