ಮನೆಯ ಮುಂಭಾಗಕ್ಕೆ ಬಿದ್ದ ಕಾರು: 9 ಜನರ ಸ್ಥಿತಿ ಗಂಭೀರ

Prasthutha|

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮನೆಯ ಮುಂಭಾಗಕ್ಕೆ ಬಿದ್ದ ಘಟನೆ ಜಿಲ್ಲೆಯ ಕಳಸ ತಾಲೂಕಿನ ಕಲ್ಮಕ್ಕಿ ಗ್ರಾಮದಲ್ಲಿ ನಡೆದಿದೆ.

- Advertisement -


ಕೋಲಾರದಿಂದ ಹೊರನಾಡಿಗೆ ಹೋಗುತ್ತಿದ್ದ ಕಾರು ಕಲ್ಮಕ್ಕಿ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಮನೆಯ ಮುಂಭಾಗಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಒಂಬತ್ತು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಗಾಯಾಳುಗಳನ್ನು ಕಳಸ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ನಂತರ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.


ಕಳಸ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Join Whatsapp