20 ಅಡಿ ಆಳದ ಹಳ್ಳಕ್ಕೆ ಬಿದ್ದ ಕಾರು; ಐವರಿಗೆ ಗಾಯ

Prasthutha|

ಚಾಮರಾಜನಗರ: ಅತೀ ವೇಗದಲ್ಲಿ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಆಳದ ಹಳ್ಳಕ್ಕೆ ಬಿದ್ದ ಘಟನೆ ಹನೂರು ಬಳಿ ನಡೆದಿದೆ.

- Advertisement -

ಕಾರಿನಲ್ಲಿದ್ದ ಐವರು ಸಣ್ಣ ಪುಟ್ಟ ಗಾಯಗೊಂಡಿದ್ದು ಅವರನ್ನು  ಹನೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ, ಚಿಕಿತ್ಸೆ ಪಡೆಯುತ್ತಿರುವ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನ ಅತ್ತಿಬೆಲೆಯಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಐದು ಮಂದಿ ಬಾಡಿಗೆ ಕಾರಿನಲ್ಲಿ ಬರುತ್ತಿದ್ದಾಗ ಇಂದು ಮುಂಜಾನೆ  3ರ ವೇಳೆ ನಿಯಂತ್ರಣ ತಪ್ಪಿದ ಕಾರು ಹನೂರು ಪಟ್ಟಣದ ಸ್ವಾಮಿ ಹಳ್ಳಕ್ಕೆ ಬಿದ್ದಿದೆ.

- Advertisement -

ಸುದ್ದಿ ತಿಳಿದ ತಕ್ಷಣವೇ  ಸ್ಥಳಕ್ಕೆ ಹನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Join Whatsapp