ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರು: ವಿಡಿಯೋ ವೈರಲ್

Prasthutha|

- Advertisement -

ಬೆಂಗಳೂರು: ಆಕಸ್ಮಿಕವಾಗಿ ಎಲೆಕ್ಟ್ರಿಕ್ ​ಕಾರಿಗೆ ಬೆಂಕಿ ಹೊತ್ತಿ ಸುಟ್ಟು ಭಸ್ಮವಾಗಿರುವಂತಹ ಘಟನೆ ದಕ್ಷಿಣ ಬೆಂಗಳೂರು ಜೆಪಿ ನಗರದ ದಾಲ್ಮಿಯಾ ಮೇಲ್ಸೇತುವೆಯಲ್ಲಿ ಶನಿವಾರ ಮಧ್ಯಾಹ್ನ ಘಟನೆ ನಡೆದಿದೆ.

ಕೂಡಲೇ ಸ್ಥಳಕ್ಕೆ ಧಾವಿಸಿದ್ದ ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ವತಃ ಕಾರು ಮಾಲೀಕರೇ ಚಾಲಾಯಿಸುತ್ತಿದ್ದು, ಈ ವೇಳೆ ಬಾನೆಟ್​ ನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಅವರು ತಕ್ಷಣ ಕಾರು ನಿಲ್ಲಿಸಿ ಹೊರಗೆ ಬಂದಿದ್ದಾರೆ. ನೋಡ ನೋಡುತ್ತಿದ್ದಂತೆ ಕೆಲವೇ ಕ್ಷಣಗಳಲ್ಲಿ ಕಾರು ಹೊತ್ತಿ ಉರಿದಿದೆ.

Join Whatsapp