ಬಸ್ಸಿಗೆ ಡಿಕ್ಕಿ ಹೊಡೆದ ಕಾರು; ನಾಲ್ವರು ದಾರುಣ ಸಾವು, ಇಬ್ಬರಿಗೆ ಗಾಯ

Prasthutha|

ಪಾಲ್ಘರ್: ಬಸ್ಸಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ–ಅಹಮದಾಬಾದ್ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.

- Advertisement -


ಹೆದ್ದಾರಿಯ ಮಹಾಲಕ್ಷ್ಮೀ ಸೇತುವೆ ಬಳಿ ಬೆಳಗಿನ ಜಾವ 3.30ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಗುಜರಾತ್’ನಿಂದ ಮುಂಬೈಗೆ ನಾಲ್ವರು ಪ್ರಯಾಣಿಸುತ್ತಿದ್ದ ಕಾರು ಹಿಂಬದಿಯಿಂದ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭ ಮಹಿಳೆ ಸೇರಿ ಕಾರಿನಲ್ಲಿದ್ದ ನಾಲ್ಕೂ ಮಂದಿ ಮೃತಪಟ್ಟಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Join Whatsapp