ಕಾರು ಮರಕ್ಕೆ ಡಿಕ್ಕಿ; CRPF ಯೋಧ ಸಾವು

Prasthutha|

ವೇಗವಾಗಿ ಬರುತ್ತಿದ್ದ ಕಾರೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕೇಂದ್ರ ಮೀಸಲು ಪಡೆ-CRPF ಯೋಧರೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮೈಸೂರು- ಬಂಟ್ವಾಳ ಹೆದ್ದಾರಿಯ ಹುಣಸೂರು ಬಳಿ ಶುಕ್ರವಾರ ರಾತ್ರಿ ನಡೆದಿದೆ.

ಪಿರಿಯಾಪಟ್ಟಣ ತಾಲೂಕಿನ ಗೊರಳ್ಳಿಯ ನಾಗರಾಜಶೆಟ್ಟಿ ಎಂಬುವವರ ಪುತ್ರ ಅಣ್ಣಯ್ಯ ಶೆಟ್ಟಿ (35)ಮೃತ ಯೋಧರಾಗಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ.

- Advertisement -

ಮಹಾರಾಷ್ಟ್ರದ ನಕ್ಸಲ್ ಏರಿಯಾದ ಗಡ್ಸರ್ನಲ್ಲಿ 14 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಣ್ಣಯ್ಯ ಶೆಟ್ಟಿ, ಎರಡು ದಿನಗಳ ಹಿಂದೆಯಷ್ಟೆ ರಜೆ ಮೇಲೆ ಊರಿಗೆ ಬಂದಿದ್ದರು. ಮೈಸೂರಿನಲ್ಲಿ ಕೆಲಸ ಮುಗಿಸಿಕೊಂಡು ಕಾರಿನಲ್ಲಿ ರಾತ್ರಿ ಊರಿಗೆ ತೆರಳುತ್ತಿದ್ದ ವೇಳೆ, ಹುಣಸೂರು ತಾಲೂಕಿನ ಕಲ್ಲಹಳ್ಳಿ ಗೇಟ್ ಬಳಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಗುದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

 ಕಾರು ಡಿಕ್ಕಿ ಹೊಡೆದ ರಭಸಕ್ಕೆ ಅಣ್ಣಯ್ಯ ಶೆಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕಾಗಮಿಸಿದ ಮೈಸೂರು ಗ್ರಾಮಾಂತರ ಠಾಣಾ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಮೃತರ ಅಂತ್ಯಕ್ರಿಯೆಯು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲು ಸಿದ್ಧತೆ ನಡೆದಿದೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.

- Advertisement -