ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಪ್ರಾಣಾಪಾಯದಿಂದ ಚಾಲಕ ಪಾರು

Prasthutha|

ಚಿಕ್ಕಮಗಳೂರು: ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರೊಂದು  ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ  ಡಿಕ್ಕಿ ಹೊಡೆದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಠಾಣಾ ವ್ಯಾಪ್ತಿ ಯ ಕೊಟ್ಟಿಗೆಹಾರದ  ಅತ್ತಿಗೆರೆ ಸಮೀಪ ನಡೆದಿದೆ.

- Advertisement -

ಹೊಡೆತದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿ ವಿದ್ಯುತ್ ತಂತಿ ರಸ್ತೆಗೆ ಬಿದ್ದಿದ್ದು, ಯಾವುದೇ ಅನಾಹುತಗಳು ಸಂಭವಿಸಿಲ್ಲ.

ಕಾರಿನ ಮಾಲಿಕ ನೆರಿಯ ಮೂಲದವರಾಗಿದ್ದು  ಸಣ್ಣ ಪುಟ್ಟ ಗಾಯಾಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Join Whatsapp