ಶೃಂಗೇರಿ : ಆಲ್ಟೋ ಕಾರ್ ಹಾಗೂ ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಆಟೋ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ನಗರದ ಚಪ್ಪರದಾಂಜನೇಯ ದೇವಸ್ಥಾನದ ಸಮೀಪದಲ್ಲಿನಡೆದಿದೆ.
ಅಪಘಾತದಲ್ಲಿ ಆಟೋ ರಿಕ್ಷಾ ಚಾಲಕನಿಗೆ ಗಾಯಗಳಾಗಿದ್ದು, ಶೃಂಗೇರಿಯ ಸಾರ್ವಜನಿಕ ಆಸ್ಪತ್ರೆಗೆದಾಖಲಿಸಲಾಗಿದೆ.
ಆಲ್ಟೋ ಕಾರ್ ಕಟ್ಟೆಬಾಗಿಲಿನ ಕಡೆಗೆ ಹಾಗೂ ಆಟೋ ಶೃಂಗೇರಿ ಬಸ್ ನಿಲ್ದಾಣದಿಂದ ಭಾರತೀ ಬೀದಿಯಲ್ಲಿ ಚಲಿಸುತ್ತಿದ್ದ ವೇಳೆ ಘಟನೆ ನಡೆದಿದೆ.
ಅಪಘಾತದ ತೀವ್ರತೆಗೆ ಆಟೋ ರಿಕ್ಷಾದ ಮುಂಭಾಗ ಜಖಂಗೊಂಡು ಗಾಜು ಸಂಪೂರ್ಣವಾಗಿ ಹುಡಿಯಾಗಿ ರಸ್ತೆಯ ತುಂಬಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ.