ನೈನಿತಾಲ್: ನದಿಯಲ್ಲಿ ಕಾರು ಕೊಚ್ಚಿ ಹೋಗಿದ್ದರಿಂದ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡ್ ರಾಜ್ಯದ ನೈನಿತಾಲ್ ಜಿಲ್ಲೆಯ ರಾಮನಗರ ಎಂಬಲ್ಲಿ ನಡೆದಿದೆ.
ಇಂದು ಮುಂಜಾನೆ ಸುರಿದ ಮಳೆಯಿಂದಾಗಿ ಉಂಟಾದ ಭಾರೀ ನೀರಿನ ಹರಿವಿನ ನಡುವೆ ರಾಮನಗರದ ಧೇಲಾ ನದಿಯಲ್ಲಿ ಕಾರು ಕೊಚ್ಚಿಹೋಗಿದ್ದು, ಅದರಲ್ಲಿದ್ದ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಒಬ್ಬ ಬಾಲಕಿಯನ್ನು ರಕ್ಷಿಸಲಾಗಿದ್ದು, ಐದು ಶವಗಳು ಇದುವರೆಗೆ ಸಿಕ್ಕಿವೆ” ಎಂದು ಕುಮಾವೂನ್ ರೇಂಜ್ ಉಪ ಪೊಲೀಸ್ ಮಹಾನಿರೀಕ್ಷಕ (ಡಿಐಜಿ) ನಿಲೇಶ್ ಆನಂದ್ ಭರನ್ ತಿಳಿಸಿದ್ದಾರೆ.
ಉತ್ತರಾಖಂಡ ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ ಡಿಆರ್ ಎಫ್), ಮತ್ತು ಅಗ್ನಿಶಾಮಕ ತಂಡವು ಘಟನಾ ಸ್ಥಳಕ್ಕೆ ಆಗಮಿಸಿದ್ದು, ಶವಗಳಿಗಾಗಿ ಶೋಧ ಕಾರ್ಯ ನಡೆಯುತ್ತಿವೆ.