Home ಟಾಪ್ ಸುದ್ದಿಗಳು ಸುಟ್ಟು ಕರಕಲಾದ ಕಾರಿನಲ್ಲಿ ಯುವಕನ ಮೃತದೇಹ ಪತ್ತೆ!

ಸುಟ್ಟು ಕರಕಲಾದ ಕಾರಿನಲ್ಲಿ ಯುವಕನ ಮೃತದೇಹ ಪತ್ತೆ!


ಬೆಂಗಳೂರು: ಸುಟ್ಟು ಕರಕಲಾದ ಕಾರೊಂದರಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಬೆಂಗಳೂರಿನ ಹೊರವಲಯದ ದೇವನಹಳ್ಳಿ ಹತ್ತಿರದ ಬಳಿ ಪತ್ತೆಯಾಗಿದೆ.

ಮೃತ ವ್ಯಕ್ತಿಯನ್ನು ಯಲಹಂಕ ನ್ಯೂ ಟೌನ್ ನಿವಾಸಿ ಆರಿಫ್ ಪಾಶಾ ಎಂದು ಗುರುತಿಸಲಾಗಿದೆ.

ಮೃತ ವ್ಯಕ್ತಿ ಖಾಸಗಿ ಹಣಕಾಸು ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದನೆಂದು ಪೊಲೀಸರು ಮಾಹಿತಿ ನೀಡಿದ್ದು, ಬೆಂಗಳೂರಿನ ಹೊರವಲಯದ ದೇವನಹಳ್ಳಿಗೆ ಹತ್ತಿರದ ಹೆಗ್ಗನಹಳ್ಳಿ ಕ್ರಾಸ್ ಬಳಿ ಕಾರು ಮತ್ತು ದೇಹ ಶನಿವಾರ ಸಿಕ್ಕಿವೆ ಎಂದು ತಿಳಿಸಿದ್ದಾರೆ.

ಪಾಶಾ ಅವರ ತಂದೆತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Join Whatsapp
Exit mobile version