Home ಟಾಪ್ ಸುದ್ದಿಗಳು ಪಾನಿಪುರಿಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ..!

ಪಾನಿಪುರಿಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ..!

►ಬ್ಯಾನ್ ಆಗುತ್ತಾ ಪಾನಿಪುರಿ?


ಬೆಂಗಳೂರು: ಗೋಬಿ, ಬಣ್ಣ ಬಣ್ಣದ ಕಬಾಬ್ ನಿಂದಾಗಿ ಹಲವು ರೋಗಗಳ ಜೊತೆ ಕ್ಯಾನ್ಸರ್ ಉಂಟು ಮಾಡುತ್ತದೆ. ಕೃತಕ ಬಣ್ಣವನ್ನು ಬಳಸಿ ಯಾರು ಗೋಬಿ ಮತ್ತು ಕಬಾಬ್ ತಯಾರು ಮಾಡಬಾರದು ಎಂದು ರಾಜ್ಯ ಸರ್ಕಾರ ಆದೇಶ ಮಾಡಿದ ಬೆನ್ನಲ್ಲೇ ಪಾನಿಪುರಿಗೆ ಬಳಸುವ ಸಾಸ್, ಮೀಟಾ ಖಾರದ ಪುಡಿ ಸೇರಿದಂತೆ 5 ಬಗೆಯ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.


ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಭಾಗದಲ್ಲಿನ ಪಾನಿಪುರಿ ಮಾದರಿಗಳನ್ನ ಸಂಗ್ರಹಿಸಿ ಪರಿಶೀಲನೆ ನಡೆಸಿದೆ. ಪರಿಶೀಲನೆ ವೇಳೆ ಪಾನಿಪೂರಿ ತಯಾರಿಕೆಗೆ ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಇರುವುದು ಪತ್ತೆಯಾಗಿದೆ. ಹೀಗಾಗಿ ಶೀಘ್ರದಲ್ಲೆ ಪಾನಿಪೂರಿಗೆ ಬಳಸುವ ಕ್ಯಾನ್ಸರ್ ಕಾರಕ ಅಂಶಗಳು ಬ್ಯಾನ್ ಮಾಡಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಿರ್ಧರಿಸಿದೆ.


ಬೆಂಗಳೂರಿನ 49 ಕಡೆಗಳಲ್ಲಿ ಪಾನಿಪುರಿ ತಯಾರಿಕೆಗೆ ಕ್ಯಾನ್ಸರ್ ಕಾರಕ ಇರುವ ಸಾಸ್ ಮತ್ತು ಮೀಟಾ ಖಾರದ ಪುಡಿ ಬಳಕೆ ಮಾಡುತ್ತಿದ್ದಾರೆ. ಹಾನಿಕಾರಕ ಅಂಶಗಳು ಮನುಷ್ಯನ ದೇಹ ಸೇರಿದರೆ ಆರೋಗ್ಯ ಕ್ಷೀಣಿಸುತ್ತಾ ಹೋಗಲಿದೆ. ಹೀಗಾಗಿ ಕ್ಯಾನ್ಸರ್ ಕಾರಕ ಇರುವ ಸಾಸ್, ಮೀಟಾ ಖಾರದ ಪುಡಿ ಬ್ಯಾನ್ ಮಾಡುವ ಬಗ್ಗೆ ಚಿಂತನೆ ನಡೆದಿದೆ.

Join Whatsapp
Exit mobile version