Home ಟಾಪ್ ಸುದ್ದಿಗಳು ಹೃದಯಾಘಾತದಿಂದ ವ್ಯಂಗ್ಯಚಿತ್ರಕಾರ ಅಜಿತ್ ನಿನನ್ ನಿಧನ

ಹೃದಯಾಘಾತದಿಂದ ವ್ಯಂಗ್ಯಚಿತ್ರಕಾರ ಅಜಿತ್ ನಿನನ್ ನಿಧನ

ಮೈಸೂರು: ಖ್ಯಾತ ವ್ಯಂಗ್ಯಚಿತ್ರಕಾರ ಅಜಿತ್ ನಿನನ್ (68) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಹೈದರಾಬಾದಿನಲ್ಲಿ ಜನಿಸಿದ ಅವರು, ಚೆನ್ನೈನಲ್ಲಿ ರಾಜ್ಯಶಾಸ್ತ್ರ ವಿಷಯದಲ್ಲಿ ಎಂ.ಎ ಪದವಿ ಪಡೆದಿದ್ದಾರೆ. ನಂತರ ವ್ಯಂಗ್ಯಚಿತ್ರಕಾರರಾದರು.

ಪ್ರಮುಖ ಪತ್ರಿಕೆಗಳಾದ ಇಂಡಿಯಾ ಟುಡೆ, ಔಟ್ ಲುಕ್, ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗಳಿಗೆ ವ್ಯಂಗ್ಯಚಿತ್ರಕಾರರಾಗಿ ಕೆಲಸ ಮಾಡಿದ್ದಾರೆ. ಇಂಡಿಯಾ ಟುಡೆ ಪತ್ರಿಕೆ ಬಳಗದ ‘ಟಾರ್ಗೆಟ್’ ಎಂಬ ಮಕ್ಕಳ ಪತ್ರಿಕೆಗೆ ‘ಡಿಟೆಕ್ಟಿವ್ ಮೂಚುವಾಲಾ’ ಎಂಬ ಸರಣಿ ವ್ಯಂಗ್ಯಚಿತ್ರಗಳನ್ನು ಇವರು ಪ್ರಕಟಿಸಿದರು. ಬಳಿಕ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಗೆ ನಿತ್ಯ ವ್ಯಂಗ್ಯಚಿತ್ರ ಬರೆಯುತ್ತಿದ್ದರು.

Join Whatsapp
Exit mobile version