Home ಟಾಪ್ ಸುದ್ದಿಗಳು ಧಾರ್ಮಿಕ ದ್ವೇಷ ಹರಡಲು ಯತ್ನ: ಸಿ.ಟಿ.ರವಿ ವಿರುದ್ಧದ ಪ್ರಕರಣಕ್ಕೆ ತಡೆ

ಧಾರ್ಮಿಕ ದ್ವೇಷ ಹರಡಲು ಯತ್ನ: ಸಿ.ಟಿ.ರವಿ ವಿರುದ್ಧದ ಪ್ರಕರಣಕ್ಕೆ ತಡೆ

ಬೆಂಗಳೂರು: ‘ಸಮಾಜದಲ್ಲಿ ಧಾರ್ಮಿಕ ದ್ವೇಷ ಹರಡಲು ಪ್ರಯತ್ನಿಸಿದ ಮತ್ತು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ’ ಎಂಬ ಆರೋಪದಡಿ ವಿಧಾನ ಪರಿಷತ್ನ ಬಿಜೆಪಿ ಸದಸ್ಯ ಸಿ.ಟಿ.ರವಿ ವಿರುದ್ಧದ ವಿಚಾರಣಾ ನ್ಯಾಯಾಲಯದಲ್ಲಿನ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.


‘ಪ್ರಕರಣ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯಗಳ ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸಬೇಕು’ ಎಂದು ಕೋರಿ ಸಿ.ಟಿ.ರವಿ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದರು.


ಎರಡೂ ಅರ್ಜಿಗಳಲ್ಲಿ ಪ್ರತಿವಾದಿಗಳಾಗಿರುವ ಚಿಕ್ಕಮಗಳೂರು ಟೌನ್ ಮತ್ತು ಬಸವನಹಳ್ಳಿ ಠಾಣಾ ಪೊಲೀಸರು, ಚುನಾವಣಾ ಅಧಿಕಾರಿಗಳಾಗಿದ್ದ ಜಯಲಕ್ಷ್ಮಮ್ಮ ಮತ್ತು ದೀಪಕ್ ಅರವಿಂದ ಗರಗ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.

Join Whatsapp
Exit mobile version