ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ | ಬಿಜೆಪಿ ಮುಖಂಡ ಈಶ್ವರಪ್ಪ ವಿರುದ್ಧದ ದೂರು ಮರುಪರಿಗಣಿಸಲು ಹೈಕೋರ್ಟ್ ನಿರ್ದೇಶನ

Prasthutha|

ಬೆಂಗಳೂರು : ಜಲಸಂಪನ್ಮೂಲ ಸಚಿವರಾಗಿದ್ದಾಗ ಬಿಜೆಪಿ ನಾಯಕ, ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕೇಳಿ ಬಂದಿದ್ದ ಅಕ್ರಮ ಆಸ್ತಿ ಗಳಿಕೆ ಆರೋಪ, ಇದೀಗ ಮತ್ತೊಮ್ಮೆ ಅವರನ್ನು ಸಂಕಷ್ಟಕ್ಕೀಡು ಮಾಡಲಿದೆ ಎಂದು ವರದಿಗಳು ತಿಳಿಸಿವೆ.

- Advertisement -

ಈ ಹಿಂದೆ ಜಲಸಂಪನ್ಮೂಲ ಸಚಿವರಾಗಿದ್ದಾಗ ಈಶ್ವರಪ್ಪ ವಿರುದ್ಧ ಆರೋಪ ಕೇಳಿಬಂದಿತ್ತು. ವಿಷಯಕ್ಕೆ ಸಂಬಂಧಿಸಿ ಖಾಸಗಿ ದೂರು ದಾಖಲಾಗಿತ್ತು. ಈ ದೂರನ್ನು ಶಿವಮೊಗ್ಗ ಲೋಕಾಯುಕ್ತ ಕೋರ್ಟ್ ರದ್ದು ಮಾಡಿತ್ತು. ಈಗ ಖಾಸಗಿ ದೂರು ಮರುಸ್ಥಾಪನೆಗೆ ಹೈಕೋರ್ಟ್ ಆದೇಶ ನೀಡಿದೆ.

2016ರಲ್ಲಿ ನ್ಯಾಯವಾದಿ ಬಿ.ವಿನೋದ್ ಶಿವಮೊಗ್ಗ ಲೋಕಾಯುಕ್ತ ಕೋರ್ಟ್ ಗೆ ಖಾಸಗಿ ದೂರು ನೀಡಿದ್ದರು. ಈಶ್ವರಪ್ಪ ಆದಾಯ ಮೀರಿ ಆಸ್ತಿ ಗಳಿಸಿದ ಆರೋಪ ಮಾಡಿದ್ದರು. ಲೋಕಾಯುಕ್ತ ಕೋರ್ಟ್ ಖಾಸಗಿ ದೂರನ್ನು ವಜಾ ಮಾಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ವಿನೋದ್ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈಗ ದೂರು ಮರುಪರಿಗಣಿಸಲು ಶಿವಮೊಗ್ಗ ಕೋರ್ಟ್ ಗೆ ಹೈಕೋರ್ಟ್ ಸೂಚನೆ ನೀಡಿದೆ.

Join Whatsapp