Home ಟಾಪ್ ಸುದ್ದಿಗಳು ಶಾಸಕರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಬೇಷರತ್ ಆಗಿ ವಾಪಸ್ ಪಡೆಯಬೇಕು: ನಳಿನ್ ಕುಮಾರ್ ಕಟೀಲ್

ಶಾಸಕರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಬೇಷರತ್ ಆಗಿ ವಾಪಸ್ ಪಡೆಯಬೇಕು: ನಳಿನ್ ಕುಮಾರ್ ಕಟೀಲ್

►ಹಿಂಪಡೆಯದಿದ್ದಲ್ಲಿ ಬೀದಿಗಿಳಿದು ಹೋರಾಟ ಎಂದ ಸಂಸದ


ಮಂಗಳೂರು: ಶಾಲಾ ಶಿಕ್ಷಕಿಯಿಂದ ಹಿಂದೂ ಧರ್ಮ ಅವಹೇಳನ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಶಾಸಕರು ಸೇರಿ ಐವರ ವಿರುದ್ಧ ಕೇಸು ದಾಖಲಿಸಿರುವುದನ್ನು ಬೇಷರತ್ ಆಗಿ ವಾಪಸ್ ಪಡೆಯಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.


ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಶಾಸಕರು, ಪಾಲಿಕೆ ಸದಸ್ಯರು ಹಾಗೂ ಸಂಘ ಪರಿವಾರದ ಮುಖಂಡರ ವಿರುದ್ಧ ಕೇಸು ದಾಖಲಿಸಿರುವುದನ್ನು ಹಿಂಪಡೆಯಿರಿ ಎಂದು ನಾವು ಕಾಂಗ್ರೆಸ್ ಎದುರು ಭಿಕ್ಷೆ ಬೇಡುವುದಿಲ್ಲ. ಅದನ್ನು ಸಾರ್ವಜನಿಕವಾಗಿ ಹೋರಾಟ ನಡೆಸುವ ಮೂಲಕ ಎದುರಿಸುತ್ತೇವೆ ಎಂದರು.


ಕೇಸುದಾಖಲಿಸಿರುವುದನ್ನು ಬೇಷರತ್ ಆಗಿ ವಾಪಸ್ ಪಡೆಯಬೇಕು. ಶಿಕ್ಷಣ ಇಲಾಖೆ ಅಧಿಕಾರಿಯ ವರ್ಗಾವಣೆ ರದ್ದುಪಡಿಸಬೇಕು. ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.

Join Whatsapp
Exit mobile version