ಪುತ್ತೂರು: ಪ್ರಚೋದನಾಕಾರಿ ಭಾಷಣ| ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಾಗೂ ಹಿಂದೂ ಜಾಗರಣ ವೇದಿಕೆ ವಿರುದ್ಧ FIR

Prasthutha|

ಪುತ್ತೂರು: ಇಲ್ಲಿನ ನಟರಾಜ ವೇದಿಕೆಯಲ್ಲಿ ಹಿಂದೂ ವಿದ್ಯಾರ್ಥಿಗಳನ್ನು ಒಗ್ಗೂಡಿಸಿಕೊಂಡು ಪ್ರಚೋದನಾಕಾರಿ ಭಾಷಣ ಮಾಡಿದ್ದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮತ್ತು ಹಿಂದೂ ಜಾಗರಣ ವೇದಿಕೆ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಈ ಸಂಬಂಧ ಉಮರ್ ಎಂಬವರು ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ IPC ಸೆಕ್ಷನ್ 153 ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

 ಪುತ್ತಿಲ ವಿರುದ್ಧ ಪ್ರಕರಣ ದಾಖಲಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸಂಘಪರಿವಾರದ ಕಾರ್ಯಕರ್ತರು ಸರ್ಕಾರವು SDPI ಒತ್ತಡಕ್ಕೆ ಮಣಿದಿದೆ ಎಂದು ಆರೋಪಿಸಿದ್ದಾರೆ.  

- Advertisement -


ಪುತ್ತೂರಿನ ಕೊಂಬೆಟ್ಟು ಜ್ಯೂನಿಯರ್ ಕಾಲೇಜಿನ ಆವರಣದಲ್ಲಿ ಎಬಿವಿಪಿ ಕಾರ್ಯಕರ್ತರು ವಿದ್ಯಾರ್ಥಿಗಳ ಮೇಲೆ ತ್ರಿಶೂಲದಿಂದ ದಾಳಿ ನಡೆಸಿದ್ದರು. ಈ ದಾಳಿಗೆ ಹಿಂದೂ ಮುಖಂಡ ಅರುಣ್ ಪುತ್ತಿಲ ಅವರ ಪ್ರಚೋದನಾಕಾರಿ ಭಾಷಣದಿಂದ ಪ್ರೇರಿತರಾಗಿ ಈ ದಾಳಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.



Join Whatsapp