ಅಮರಾವತಿ: ವಿವಾದಿತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಟಿಡಿಪಿ ಮಂಡಲ ಕಾರ್ಯದರ್ಶಿ ರಾಮಲಿಂಗಂ ನೀಡಿದ ದೂರಿನ ಮೇರೆಗೆ ರಾಮ್ ಗೋಪಾಲ್ ವರ್ಮಾ ಅವರು ವಿರುದ್ಧ ಪ್ರಕಾಶಂ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸಬ್ ಇನ್ಸ್ ಪೆಕ್ಟರ್ ಶಿವ ರಾಮಯ್ಯ ತಿಳಿಸಿದ್ದಾರೆ.
ಇತ್ತೀಚೆಗೆ ಚುನಾವಣೆಗೂ ಮುನ್ನ ವ್ಯೂಹಂ ಸಿನಿಮಾವನ್ನು ಶೂಟ್ ಮಾಡಿ ರಿಲೀಸ್ ಮಾಡಿದ್ದ ಆರ್ ಜಿವಿ, ಈ ಸಿನಿಮಾ ಪ್ರಚಾರದ ವೇಳೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಅವರ ಪುತ್ರ ನಾರಾ ಲೋಕೇಶ್ ಮತ್ತು ಸೊಸೆ ಬ್ರಾಹ್ಮಣಿ ಸೇರಿದಂತೆ ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕರಿಗೆ ಸಂಬಂಧಿಸಿದ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕವಾಗಿ ಪೋಸ್ಟ್ ಮಾಡಿದ ಆರೋಪದ ಮೇಲೆ ದೂರು ನೀಡಿದ್ದಾರೆ ಎನ್ನಲಾಗಿದೆ.
ಆರೋಪಗಳ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಸಬ್ ಇನ್ಸ್ ಪೆಕ್ಟರ್ ಮಾಹಿತಿ ನೀಡಿದರು. ರಾಮ್ ಗೋಪಾಲ್ ವರ್ಮಾ ಅವರು ತಮ್ಮ ವ್ಯೂಹಂ ಚಿತ್ರದ ಪ್ರಚಾರದ ಭಾಗವಾಗಿ ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ವಿಷಯವನ್ನು ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಭಾನುವಾರ ರಾತ್ರಿ ಅವರ ವಿರುದ್ಧ ದೂರು ದಾಖಲಾಗಿದೆ.