ಮಂಗಳೂರಿನ ಜೆರೋಸಾ ಶಾಲಾ ಬಳಿ‌ ದಾಂಧಲೆ: ವೇದವ್ಯಾಸ ಕಾಮತ್, ಭರತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

Prasthutha|

- Advertisement -

ಮಂಗಳೂರು: ನಗರದ ಸಂತ ಜೆರೋಸಾ ಶಾಲೆಯಲ್ಲಿ ನಡೆದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಾಸಕರು ಹಾಗೂ ಇಬ್ಬರು ಕಾರ್ಪೊರೇಟರ್‌ ಗಳು ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಭರತ್ ಶೆಟ್ಟಿ, ಕಾರ್ಪೊರೇಟರ್‌ಗಳಾದ ಸಂದೀಪ್ ಗರೋಡಿ, ಭರತ್ ಕುಮಾರ್, ಸಂಘಪರಿವಾರದ ಶರಣ್ ಪಂಪ್‌ ವೆಲ್ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

ಅನಿಲ್‌ ಜೆರಾಲ್ಡ್ ಲೋಬೊ ಎಂಬುವರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶಾಲೆಯ ಶಿಕ್ಷಕಿ‌ಯೊಬ್ಬರು‌ ಹಿಂದೂ ಧರ್ಮ ಮತ್ತು ದೇವರನ್ನು ಅವಹೇಳಿಸಿದ್ದಾರೆ ಎಂದು ಆರೋಪಿಸಿ ಸಂಘ ಪರಿವಾರದ ಕಾರ್ಯಕರ್ತರು ಶಾಲೆಯ ಬಳಿ ಅಶಾಂತಿಯ ವಾತಾವರಣ ಸೃಷ್ಟಿಸಿದ್ದರು.

ಫೆ.‌12 ರಂದು ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ ಶಾಲೆಯ‌‌ ಮುಂದೆ ಜಮಾಯಿಸಿ ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕನ್ನು ಶಾಲೆಯ ವಿರುದ್ಧ ಎತ್ತಿಕಟ್ಟುವಂತಹ ಪ್ರಯತ್ನ ನಡೆಸಿದ್ದರು.

ಶಾಲಾ ಆಡಳಿತ ಮಂಡಳಿಯ ನಿಮಯಗಳನ್ನು ವಿದ್ಯಾರ್ಥಿಗಳು ಉಲ್ಲಂಘಿಸುವಂತೆ ಪ್ರಚೋದಿಸಿದ್ದಾರೆ. ಹಾಗೆಯೇ ಶಾಲಾ ಆಡಳಿತ ಮಂಡಳಿಯ ವಿರುದ್ಧ ಬೆದರಿಕೆ ಹಾಕಿರುತ್ತಾರೆ. ಈ ಮೂಲಕ ಜಿಲ್ಲೆಯ ಶಾಂತಿ ಮತ್ತು ನೆಮ್ಮದಿಗೆ ಭಂಗ ತರಲು ಯತ್ನಿಸಿದ್ದಾರೆ ಎಂದುಅನಿಲ್‌ ಜೆರಾಲ್ಡ್ ಲೋಬೊ ದೂರಿನಲ್ಲಿ ತಿಳಿಸಲಾಗಿತ್ತು. ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp