ಪುತ್ತೂರು | KSRTC ಬಸ್ ನಲ್ಲಿ ಪ್ರಯಾಣಿಕನಿಗೆ ತುಳಿದ ಪ್ರಕರಣ: ನಿರ್ವಾಹಕ ಅಮಾನತು

Prasthutha|

ಪುತ್ತೂರು: ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪಾನ ಮತ್ತ ಪ್ರಯಾಣಿಕೋರ್ವನಿಗೆ ಕಾಲಿನಿಂದ ತುಳಿದ ಪ್ರರಣಕ್ಕೆ ಸಂಬಂಧಿಸಿದಂತೆ ನಿರ್ವಾಹಕನನ್ನು ಅಮಾನತು ಮಾಡಲಾಗಿದೆ.

- Advertisement -


ನಿನ್ನೆ ಸಂಜೆ ಈಶ್ವರಮಂಗಲದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಪಡುವನ್ನೂರು ಗ್ರಾಮದ ನಿವಾಸಿ ಕೃಷ್ಣಪ್ಪ ಎಂಬವರು ಪದಡ್ಕ ಹೋಗಲು ಬಸ್ಸನ್ನು ಹತ್ತಿದ್ದಾರೆ. ಈ ವೇಳೆ ಮದ್ಯಪಾನ ಮಾಡಿರುವುದನ್ನು ಗಮನಿಸಿದ ನಿರ್ವಾಹಕ ಕೃಷ್ಣಪ್ಪ ರವರನ್ನು ಕಾಲಿನಿಂದ ತುಳಿದು ಹಲ್ಲೆ ನಡೆಸಿದ್ದರು. ಈ ವೇಳೆ ಕೃಷ್ಣಪ್ಪ ಕೆಳಗೆ ರಸ್ತೆಗೆ ಬಿದ್ದಿದ್ದಾರೆ. ಇದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಬಸ್ ನಿರ್ವಾಹಕ ನನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.

Join Whatsapp