Home ಟಾಪ್ ಸುದ್ದಿಗಳು ಮೂತ್ರ ವಿಸರ್ಜನೆ ಪ್ರಕರಣ; ಆರೋಪಿ ಬಿಡುಗಡೆಗೆ ಸಂತ್ರಸ್ತ ಮನವಿ

ಮೂತ್ರ ವಿಸರ್ಜನೆ ಪ್ರಕರಣ; ಆರೋಪಿ ಬಿಡುಗಡೆಗೆ ಸಂತ್ರಸ್ತ ಮನವಿ

ಭೋಪಾಲ್: ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜಿಸಿದ ಘಟನೆಗೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಸಂತ್ರಸ್ತ ದಶಮತ್ ರಾವತ್, ಆರೋಪಿಯಿಂದ ತಪ್ಪಾಗಿದೆ. ಅವರಿಗೆ ತಪ್ಪಿನ ಅರಿವಾಗಿದೆ. ಅವರನ್ನು ಬಿಡುಗಡೆಗೊಳಿಸಿ ಎಂದು ರಾಜ್ಯ ಸರ್ಕಾರವನ್ನು ಕೋರಿದ್ದಾರೆ.


ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಹೇಯಕೃತ್ಯ ಎಸಗಿದ್ದ ಆರೋಪಿ ಪ್ರವೇಶ್ ಶುಕ್ಲಾನನ್ನು ಬುಧವಾರ ಬಂಧಿಸಲಾಗಿತ್ತು. ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 294 (ಅಸಭ್ಯ ವರ್ತನೆ), 504 (ಉದ್ದೇಶ ಪೂರ್ವಕ ಅವಹೇಳನ), ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ರಾಷ್ಟ್ರೀಯ ಭದ್ರತಾ ಕಾಯ್ದೆಯಡಿಯೂ (ಎನ್ಎಸ್ಎ) ಕ್ರಮಕೈಗೊಳ್ಳಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಆರೋಪಿಯ ಅಕ್ರಮ ಸ್ವತ್ತುಗಳನ್ನು ನೆಲಸಮಗೊಳಿಸಲಾಗಿದೆ.

Join Whatsapp
Exit mobile version