Home ಟಾಪ್ ಸುದ್ದಿಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ: ಬಿಜೆಪಿ ಶಾಸಕ ರಾಜಾ ಸಿಂಗ್ ವಿರುದ್ಧ ಪ್ರಕರಣ ದಾಖಲು

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ಬಿಜೆಪಿ ಶಾಸಕ ರಾಜಾ ಸಿಂಗ್ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ಬಿಜೆಪಿಯ ವಿವಾದಾತ್ಮಕ ಶಾಸಕ ರಾಜಾ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿದೆ.

ಆಕ್ಷೇಪಾರ್ಹ ಹೇಳಿಕೆ ಮೂಲಕ ನಿರ್ದಿಷ್ಟ ಸಮುದಾಯವನ್ನು ರಾಜಾ ಸಿಂಗ್ ಅವಹೇಳನಗೈದಿದ್ದರು. ಈ ಕುರಿತು ವ್ಯಾಪಾರಿ ಮೊಹಮ್ಮದ್ ಅಲಿ ಎಂಬವರು ದೂರು ನೀಡಿದ್ದರು. ಅದರ ಅನ್ವಯ ಐಪಿಸಿ ಸೆಕ್ಷನ್ 295 A ಅಡಿಯಲ್ಲಿ ಹೈದರಬಾದ್’ನ ಕಂಚನ್ಬಾಗ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.

ಬಿಜೆಪಿ ಶಾಸಕ ರಾಜಾ ಸಿಂಗ್‌ ಹೇಳಿಕೆಯ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ನಿರ್ದಿಷ್ಟ ಸಮುದಾಯದ ಜವರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಹೇಳಿಕೆಯನ್ನು ನೀಡಿದ್ದಾರೆ ಎಂದು ಅಲಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಕಂಚನ್ ಬಾಗ್ ನಿವಾಸಿ ಮೊಹಮ್ಮದ್ ಅಲಿ ನೀಡಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿದ್ದೇವೆ ಎಂದು ಕಂಚನ್ ಬಾಗ್ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಪಿ ಉಮಾ ಮಹೇಶ್ವರ್ ರಾವ್ ತಿಳಿಸಿದ್ದಾರೆ.

Join Whatsapp
Exit mobile version