ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲು

- Advertisement -

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ, ಸೌಜನ್ಯ ಪರ ಹೋರಾಟದ ನೇತೃತ್ವ ವಹಿಸಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

- Advertisement -

ಫೆ. 8ರಂದು ಬೆಳ್ತಂಗಡಿಯಲ್ಲಿ ನಡೆದ ಹಿಂದೂ ಸಮಾಜ ರಕ್ಷಣ ಕಾರ್ಯಕ್ರಮದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ದೇವಾಲಯಗಳ ಬಗ್ಗೆ ಜನರಲ್ಲಿ ಅನುಮಾನ ಹುಟ್ಟಿಸುವ ಹೇಳಿಕೆಗಳನ್ನು ನೀಡಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಿದ್ದಾರೆಂದು ದೂರಲಾಗಿದೆ.

ಸಾರ್ವಜನಿಕ ಸಭೆಗಳಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ವಿರುದ್ದವಾಗಿ, ಅವರ ಕುಟುಂಬ, ಸಂಸ್ಥೆಗಳ ಬಗ್ಗೆ ಅಪಪ್ರಚಾರ ಹಾಗೂ ಮಾನಹಾನಿಕರವಾಗಿ ಮಾತನಾಡಬಾರದು ಎಂಬ ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿ ಭಾಷಣ ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

- Advertisement -


Must Read

Related Articles