Home ಟಾಪ್ ಸುದ್ದಿಗಳು ಸಂಸದ ಪ್ರತಾಪ ಸಿಂಹ ವಿರುದ್ಧ ಪ್ರಕರಣ ದಾಖಲು

ಸಂಸದ ಪ್ರತಾಪ ಸಿಂಹ ವಿರುದ್ಧ ಪ್ರಕರಣ ದಾಖಲು

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಸಂಸದ ಪ್ರತಾಪ ಸಿಂಹ ವಿರುದ್ಧ ಇಲ್ಲಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.


ಕಾಂಗ್ರೆಸ್ ಮುಖಂಡರು ನೀಡಿದ ದೂರಿನ ಮೇರೆಗೆ 1860ರ ಐಪಿಸಿ 504, 153ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನಿನ್ನೆ ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್ ಸಿಂಹ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಟೀಕೆ ಮಾಡುತ್ತಾ ಸೋಮಾರಿ ಸಿದ್ದ ಎಂದು ಹೇಳಿಕೆ ನೀಡಿದ್ದರು. ಇದು ಅವಹೇನಕಾರಿ ಪದವಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ.

Join Whatsapp
Exit mobile version